ವಿಶ್ವ ವಿಖ್ಯಾತ ಮಡಿಕೇರಿ ದಸರಾ ಕಾರ್ಯಕ್ರಮದ ಅಂಗವಾಗಿ ಮಡಿಕೇರಿ ನಗರದೊಳಗೆ ಬರುವ ವಾಹನ ದಟ್ಟಣೆ ಹಾಗೂ ದಶಮಂಟಪಗಳ ಸುಗಮ ಸಂಚಾರ ಮತ್ತು ಬಂದೋಬಸ್ತ್‌ಗೆ ಅನುಕೂಲವಾಗುವಂತೆ, ಪೊಲೀಸ್ ವರಿಷ್ಟಾಧಿಕಾರಿಗಳ ಕೋರಿಕೆಯಂತೆ, ವಾಹನಗಳ ಮಾರ್ಗ ಬದಲಾವಣೆ ಮತ್ತು ಮಾಡಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ದಿನಾಂಕ 12-10-2024 ರಂದು ಮಧ್ಯಾಹ್ನ 2.00 ಗಂಟೆಯಿಂದ ದಿನಾಂಕ 13-10-2024 ಬೆಳಿಗ್ಗೆ 10.00 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.
ದಿನಾಂಕ 12-10-2024 ರಂದು ಮಧ್ಯಾಹ್ನ 2.00 ಗಂಟೆಯಿಂದ ದಿನಾಂಕ 13-10-2024 ಬೆಳಿಗ್ಗೆ 10.00 ಗಂಟೆಯವರೆಗೆ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬಿಳಿಕೆರೆ, ಕೆ.ಆರ್.ನಗರ, ಹೊಳೆನರಸೀಪುರ ಹಾಸನ ಸಕಲೇಶಪುರ ಮಾರ್ಗವಾಗಿ ಮಾರ್ಗವಾಗಿ ಸಂಚರಿಸುವುದು.
ದಿನಾಂಕ 12-10-2024 ಸಂಜೆ 4.00 ಗಂಟೆಯಿಂದ 13-10-2024 ರಂದು ಬೆಳಿಗ್ಗೆ 10.00 ಗಂಟೆಯವರೆಗೆ ಮಡಿಕೇರಿ ನಗರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ.
ಮಡಿಕೇರಿ ನಗರದ, ವಾಹನ ಸಂಚಾರಗಳ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯ ವಿವರ
ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ಮತ್ತು ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಮುಂದುವರೆದು ಎಸ್.ಪಿ ಕಚೇರಿ ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು.
ವಿರಾಜಪೇಟೆ, ಮೂರ್ನಾಡು ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳಿಗೆ ಜಿಟಿ ವೃತ್ತದಿಂದ ಮೈಸೂರು ರಸ್ತೆ ಕಡೆಗೆ ತಿರುಗಿ ಮೈಸೂರು ರಸ್ತೆಯಲ್ಲಿ ಸಾಗಿ ಚೈನ್‌ಗೇಟ್ ಮೂಲಕ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಿಲುಗಡೆಗೊಳಿಸುವುದು.
ಗಾಳಿಬೀಡು ಅಬ್ಬಿಪಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು.
ಮೈಸೂರು, ಸಿದ್ದಾಪುರ, ಮಂಗಳೂರು ಕಡೆಯಿಂದ ಬರುವ ದ್ವಿಚಕ್ರ ವಾಹನಗಳ ನಿಲುಗಡೆಗೆ ಮೈಸೂರು ರಸ್ತೆಯ ಈಸ್ಟ್ ಎಂಡ್ ಹೋಟೆಲ್ ಮುಂಭಾಗದಲ್ಲಿರುವ ಶಾಂತಿ ಚರ್ಚ್ ಮೈದಾನದಲ್ಲಿ ನಿಲುಗಡೆ ಮಾಡುವುದು.
ನಗರದಲ್ಲಿರುವ ಗಣಪತಿ ಬೀದಿ, ಮಹದೇವಪೇಟೆ, ಕಾಲೇಜು ರಸ್ತೆ, ಕೊಹಿನೂರು ರಸ್ತೆ ಮತ್ತು ನಗರದ ಮದ್ಯಭಾಗದಲ್ಲಿರುವ ಸಾರ್ವಜನಿಕರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸದೇ, ತಮ್ಮ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನಿಲುಗಡೆಗೊಳಿಸುವುದು.
ದಿನಾಂಕ 12-10-2024 ರಂದು ಸಮಯ ಸಂಜೆ 4.00 ಗಂಟೆಯಿಂದ ದಿನಾಂಕ 13-10-2024ರ ಬೆಳಿಗ್ಗೆ 10.00 ಗಂಟೆಯವರೆಗೆ ನಗರದೊಳಗೆ ವಾಹನ ಸಂಚಾರವನ್ನು ನಿರ್ಬಂಧಿಸುವುದು, ಮತ್ತು ನಗರದೊಳಗೆ ಇರುವ ಎಲ್ಲಾ ರಸ್ತೆಗಳನ್ನು ನಿಲುಗಡೆ ರಹಿತ ರಸ್ತೆಗಳೆಂದು ಪ್ರಕಟಿಸುವುದು. ಗಣಪತಿ ಬೀದಿ, ಮಹದೇವಪೇಟೆ, ಕಾಲೇಜು ರಸ್ತೆ, ಕೊಹಿನೂರು ರಸ್ತೆಯಲ್ಲಿ 13-10-2024ರ ಸಂಜೆ 4.00 ಗಂಟೆಯವರೆಗೂ ನಿಲುಗಡೆ ರಹಿತ ರಸ್ತೆಗಳಾಗಿರುತ್ತದೆ.
ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಡಿಪೋ ಮತ್ತು ಆರ್.ಎಂ.ಸಿ ಯನ್ನು ಬಸ್ಸು ನಿಲ್ದಾಣವಾಗಿ ಮಾರ್ಪಾಡಿಸಿಕೊಳ್ಳುವುದು ಮತ್ತು ನಗರದೊಳಗೆ ಸಂಚರಿಸದಂತೆ ವ್ಯವಸ್ಥೆ ಮಾಡಿಕೊಳ್ಳುವುದು. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು.
ಖಾಸಗಿ ಬಸ್ಸುಗಳು ನಗರದೊಳಗೆ ಆಗಮಿಸದೇ ಜಿಟಿ ವೃತ್ತದಲ್ಲಿಯೇ ಪ್ರಯಾಣಿಕರನ್ನು ಇಳಿಸಿ, ಹತ್ತಿಸಿ ತೆರಳುವುದು. ಮತ್ತು ಖಾಸಗಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು.
ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ಸ್ಥಳ
ಎಫ್.ಎಂ.ಸಿ ಕಾಲೇಜು ಮೈದಾನ
ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನ
ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ
ಐಟಿಐ ಕಾಲೇಜು ಮೈದಾನ
ಶಾಂತಿ ಚರ್ಚ್ ಮೈದಾನ (ದ್ವಿ ಚಕ್ರ ಮೋಟಾರು ಸೈಕಲ್ ಮಾತ್ರ)
ಮ್ಯಾನ್ಸ್ ಕಾಂಪೌಂಡ್
ಜೂನಿಯರ್ ಕಾಲೇಜು ಮೈದಾನ
ಹೊಸ ಖಾಸಗಿ ಬಸ್ಸು ನಿಲ್ದಾಣ
ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ 1989ರ (ತಿದ್ದುಪಡಿ ನಿಯಮ 1990) ನಿಯಮ 221ಎ(2)ರಂತೆ ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮಾನ್ಯ ಜಿಲ್ಲಾಧಿ ಕಾರಿಗಳು ಆದೇಶ ಮಾಡಿದ್ದಾರೆ.