ಸುಪ್ರಸಿದ್ದ ಗೋಣಿಕೊಪ್ಪ ದಸರಾ ಕಾರ್ಯಕ್ರಮದ ಅಂಗವಾಗಿ ಪಟ್ಟಣದೊಳಗೆ ಬರುವ, ವಾಹನ ದಟ್ಟಣೆ ಹಾಗೂ ದಶಮಂಟಪಗಳ ಸುಗಮ ಸಂಚಾರ ಮತ್ತು ಬಂದೋಬಸ್ತ್ಗೆ ಅನುಕೂಲವಾಗುವಂತೆ, ಪೊಲೀಸ್ ವರಿಷ್ಟಾಧಿಕಾರಿಗಳ ಕೋರಿಕೆಯಂತೆ, ವಾಹನಗಳ ಮಾರ್ಗ ಬದಲಾವಣೆ ಮತ್ತು ಮಾಡಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಗೋಣಿಕೊಪ್ಪ ಪಟ್ಟಣ ದಸರಾ ಸಂದರ್ಭದಲ್ಲಿ ವಾಹನ ಸಂಚಾರಕ್ಕಾಗಿ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಿರುವ ವಿವರ
ಗೋಣಿಕೊಪ್ಪ ನಗರದ ಉಮಾಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ, ಪೊನ್ನಂಪೇಟೆ ರಸ್ತೆ ಜಂಕ್ಷನ್ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪೊನ್ನಂಪೇಟೆ ರಸ್ತೆ, ಬೈಪಾಸ್ ರಸ್ತೆ ಜಂಕ್ಷನ್ನಿಂದ ಐಪಿ ಜಂಕ್ಷನ್ವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಬರುವ ವಾಹನಗಳು ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವಿರಾಜಪೇಟೆಗೆ ಹೋಗುವುದು.
ವಿರಾಜಪೇಟೆಯಿಂದ ಗೋಣಿಕೊಪ್ಪ-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ
ವಾಹನಗಳು- ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರ್ ಶಾಲೆ ಜಂಕ್ಷನ್- ಪಾಲಿಬೆಟ್ಟದ ಟಾಟಾ ಸ್ಟೋರ್ ಜಂಕ್ಷನ್-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವುದು.
ಕೇರಳದಿಂದ ಪೆರುಂಬಾಡಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಪೆರುಂಬಾಡಿ-ವಿರಾಜಪೇಟೆ-ಅಮೃತ್ತಿ-ಸಿದ್ದಾಪುರ ಮೂಲಕ ಹೋಗುವುದು
ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.
ಬಾಳಲೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು-ಬಾಳಲೆ- ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು.
ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು.
ಮೈಸೂರು-ತಿತಿಮತಿ-ಗೋಣಿಕೊಪ್ಪ-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ತಿತಿಮತಿ-ಕೋಣನಕಟ್ಟೆ-ಪೊನ್ನಪ್ಪಸಂತೆ-ನಲ್ಲೂರು-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.
ಕುಟ್ಟ-ಶ್ರೀಮಂಗಲ-ಪೊನ್ನಂಪೇಟೆ-ಗೋಣಿಕೊಪ್ಪ-ಮೈಸೂರು ಕಡೆಗೆ ಹೋಗುವ ವಾಹನಗಳು, ಕುಟ್ಟ-ಶ್ರೀಮಂಗಲ, ಪೊನ್ನಂಪೇಟೆ, ನಲ್ಲೂರು, ಪೊನ್ನಪ್ಪಸಂತೆ, ಕೋಣನಕಟ್ಟೆ, ತಿತಿಮತಿ ಮಾರ್ಗವಾಗಿ ಸಂಚರಿ ವುದು.
ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ ಬಾಳಲೆ ಕಡೆಗೆ ಹೋಗುವ ವಾಹನಗಳು ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.
ದಸರಾ ವೀಕ್ಷಿಸಲು ಬರುವ ಸಾರ್ವಜನಿಕರ ವಾಹನ ನಿಲುಗಡೆ ಸ್ಥಳಗಳು:-
ದಸರಾ ವೀಕ್ಷಣೆಗೆ ಗೋಣಿಕೊಪ್ಪಕ್ಕೆ ವಿರಾಜಪೇಟೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನ
ಪೊನ್ನಂಪೇಟೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪ-ಪೊನ್ನಂಪೇಟೆ ರಸ್ತೆಯಲ್ಲಿರುವ ರುದ್ರಭೂಮಿಯ ಹಿಂದಕ್ಕೆ ಪೊನ್ನಂಪೇಟೆ ರಸ್ತೆಯ ಬದಿಯಲ್ಲಿ ತಿ
ತಿಮತಿ ಮತ್ತು ಬಾಳೆಲೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪಆರ್.ಎಂ.ಸಿ. ಆವರಣದಲ್ಲಿ
ಪಾಲಿಬೆಟ್ಟ ಕಡೆಯಿಂದ ಬರುವ ವಾಹನಗಳಿಗೆ – ಪಾಲಿಬೆಟ್ಟ ರಸ್ತೆಯಲ್ಲಿ ಶಾಸ್ತಾ ಇಂಡಸ್ಟ್ರೀಸ್ ನಿಂದ ಅತ್ತೂರು ಕಡೆಗೆ ರಸ್ತೆಯ ಒಂದು ಬದಿಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ 1989ರ (ತಿದ್ದುಪಡಿ ನಿಯಮ 1990) ನಿಯಮ 221ಎ(2)ರಂತೆ ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮಾನ್ಯ ಜಿಲ್ಲಾಧಿ ಕಾರಿಗಳು ಆದೇಶ ಮಾಡಿದ್ದಾರೆ.