Nadubadenews ಮಾದಾಪುರ, ಅ.22:– 66/33/11ಕೆವಿ ವಿದ್ಯುತ್ ವಿತರಣ ಕೇಂದ್ರದಿಂದ ಹೊರಹೊಮ್ಮುವ ಎಫ್2 ಮಾದಾಪುರ ಫೀಡರ್‍ನ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಕ್ಟೋಬರ್, 24 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆದ್ದರಿಂದ ಹರದೂರು, ಗರಗಂದೂರು, ಹಳಿಯೂರು, ನಂದಿಮೊಟ್ಟೆ, ಮಾದಾಪುರ, ಕುಂಬೂರು, ಬಿಳಿಗೇರಿ, ಜಂಬೂರುಬಾಣೆ, ಹಟ್ಟಿಹೊಳೆ, ಗರ್ವಾಲೆ, ಸೂರ್ಲಬ್ಬಿ, ಕಾಂಡನಕೊಲ್ಲಿ, ಪನ್ಯ, ಬೆಟ್ಟಗೇರಿ, ಸಿಸಿಎಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.