ಮಡಿಕೇರಿಯಲ್ಲಿ ಜೂ.13 ರಂದು ಉದ್ಯೋಗ ಮೇಳ…

 ಮಡಿಕೇರಿ ಜೂ.11(Nadubade News): ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಟೀಷರ್ ದಿ ಟೆಕ್ನಿಕಲ್ ಸರ್ವೀಸ್  ಕಲ್ಯಾಣಿ ಮೋಟಾರ್ಸ್ ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಅಪೋಲೋ ಫಾರ್ಮಸಿ, ಮೈಸೂರು, ತಾಜ್ ರೆಸಾಟ್ರ್ಸ್, ಮಡಿಕೇರಿ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. […]

Continue Reading

ವಿವಿಧದತ್ತಿ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಪತ್ರಕರ್ತರು

ಮಡಿಕೇರಿ, ಜೂನ್:‌ 10, (nadubadenews): ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದ್ದು ಈ ಕೆಳಗಿನ ಪತ್ರಕರ್ತರು ಪ್ರಶಸ್ತಿ ಪಡೆದುಕೊಂಡಿದ್ದಾರೆ. 1.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು  ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಒಂದೇ ಊರು ಮೂರು ಚೆಕ್ ಡ್ಯಾಂ” ವರದಿಗೆ ಅಣ್ಣೀರ ಹರೀಶ್ ಮಾದಪ್ಪ  ಪಡೆದುಕೊಂಡಿದ್ದಾರೆ. 2. ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು  […]

Continue Reading

ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

ಮಡಿಕೇರಿ ಜೂ.10(Nadubade News): ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್ ಡಬ್ಲ್ಯು), ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್ ಡಬ್ಲ್ಯು ) ಹುದ್ದೆಗಳು ಖಾಲಿ ಇದ್ದು, ಬೌದ್ಧಿಕ ವಿಕಲತೆ (ಬುದ್ದಿಮಾಂದ್ಯತೆ) ಹಾಗೂ ಮಾನಸಿಕ ಅಸ್ವಸ್ಥತೆ ಇರುವ ವಿಕಲಚೇತನರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಜುಲೈ, 07 ರೊಳಗೆ ಅರ್ಜಿ ಸಲ್ಲಿಸಬಹುದು.  ನಗರ ಪುನರ್ವಸತಿ ಕಾರ್ಯಕರ್ತರು, ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 […]

Continue Reading

ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…

  ಮಡಿಕೇರಿ ಜೂ.10 (Nadubade News):  ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂನ್, 11 ರಂದು (ನಾಳೆ) ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.  ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು […]

Continue Reading

ಕೊಡವರಿಗೆ ಮಾದರಿ ಆಗಬಲ್ಲ ತುಳುವರು…!!

ಸಂಪಾದಕೀಯ: ಜೂ.09: (nadubadenews) :       ಕೊಡವ ಮತ್ತು ತುಳುವ ದಕ್ಷೀಣ ಭಾರತದ ನಾನಾ ಭಾಗಗಳಲ್ಲಿ ಪಾರಮ್ಯ ಮೆರೆದಿವೆ. ಸರ್ವ ಸ್ವತಂತ್ರ ಆದಿಭಾಷೆಗಳಾಗಿ ಹಿಗ್ಗಿವೆ. ಅಷ್ಟೇ ವೇಗವಾಗಿ  ಆಧುನೀಕತೆಯ ಬಿರುಗಾಳಿಗೆ ಸಿಲುಕಿ ನಲುಗಿವೆ. ಇನ್ನೇನು ಕೆಲವೇ ವರ್ಷಗಳಲ್ಲಿ ಅಳಿದು ಹೋದಾವೂ ಎನ್ನುವಷ್ಟು ಸೊರಗಿವೆ.  ಇವೆರಡೂ ಭಾಷೆಗಳು ಮತ್ತು ಅದನ್ನಾಡುವ ಜನರು ತಮ್ಮ ಭಾಷೆ, ನೆಲ ಮತ್ತು ಮೂಲ ಸಂಸ್ಕೃತಿಗಾಗಿ ಹೆಣಗುತ್ತಿವೆ. ಈ ಹೆಣಗಾಟ ತೊಳಲಾಟಕ್ಕೆ ಕಾರಣರಾದವರೂ ನಾವೇ ಎನ್ನುವ ಸತ್ಯವೂ ನಮಗೆ ತಿಳಿದಿದೆ.     ಆದರೆ ಈ ಎರಡೂ ಭಾಷೆಗಳನ್ನೊಮ್ಮೆ […]

Continue Reading

ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಮದೆ ಗ್ರಾಮಸ್ಥರಿಂದ ಶಾಸಕರ ಭೇಟಿ…

ವಿರಾಜಪೇಟೆ ಜೂ.09 (Nadubade News): ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮದೆ ಗ್ರಾಮದ, ಅಮ್ಮೆಂಗೇರಿ ಸುಮಾರು 30ಕ್ಕೂ ಅಧಿಕ ನಿವಾಸಿಗಳ ನಿಯೋಗವು,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಗೂ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ರವರ ನೇತೃತ್ವದಲ್ಲಿ, ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು ಅವರ ವಿರಾಜಪೇಟೆ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಹಲವು ಬೇಡಿಕೆಗಳ ಮನವಿ ಪತ್ರವನ್ನು ನೀಡಿದರು.    ಪ್ರಮುಖವಾಗಿ ತಮ್ಮ ಭಾಗಕ್ಕೆ ಮೂಲಭೂತ […]

Continue Reading

ಯೋಗ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಅಭಿಯಾನ…

ಮಡಿಕೇರಿ ಜೂ.07(Nadubade News): 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಯೋಗಭ್ಯಾಸದೊಂದಿಗೆ ಶ್ರಮದಾನ ಮತ್ತು ಸ್ವಚ್ಛತಾ ಅಭಿಯಾನ ಹಾಗೂ ಸಸ್ಯಗಳನ್ನು ನೆಡುವ ಕಾರ್ಯಕ್ರಮವು ಜೂನ್, 10 ರಂದು ಬೆಳಗ್ಗೆ 8.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಕಚೇರಿಯ ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.

Continue Reading

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ…

   ಮಡಿಕೇರಿ ಜೂ.07(Nadubade News): 2025-26 ನೇ ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.    ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-IIIಬಿ) ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆಗಳಾದ ಬಸವ ಬೆಳಗು ಯೋಜನೆ (ಹೊಸದು), ಬಸವ ಬೆಳಗು ಯೋಜನೆ (ನವೀಕರಣ), ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸದು), ಜೀವಜಲಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, […]

Continue Reading

ದ್ವಿತೀಯ ಪಿಯುಸಿ ಪರೀಕ್ಷೆ-3 ವ್ಯವಸ್ಥಿತವಾಗಿ ನಡೆಸಲು ಸೂಚನೆ…

ಮಡಿಕೇರಿ ಜೂ.07(Nadubade News): ದ್ವಿತೀಯ ಪಿಯುಸಿ ಪರೀಕ್ಷೆ-3 ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪರೀಕ್ಷೆ-2 ನಡೆಸಿದಂತೆ ಪರೀಕ್ಷೆ-3 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.    ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು […]

Continue Reading