ದ್ವಿತೀಯ ಪಿಯುಸಿ ಪರೀಕ್ಷೆ-2 ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ…
ಮಡಿಕೇರಿ ಏ.23: ದ್ವಿತೀಯ ಪಿಯುಸಿ ಪರೀಕ್ಷೆ-2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪರೀಕ್ಷೆ-1 ನಡೆಸಿದಂತೆ ಪರೀಕ್ಷೆ-2 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು […]
Continue Reading


