ಸಾರ್ವಜನಿಕ ಸ್ಪಂದನೆಗೆ ಅನಗತ್ಯ ವಿಳಂಬ ಮಾಡುವ ಅಧಿಕಾರಿಗಳ ತಲೆದಂಡ ಖಚಿತ: ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಎಚ್ಚರಿಕೆ
ವಿರಾಜಪೇಟೆ, ಡಿ.09: ಸರ್ಕಾರದ ಎಲ್ಲಾ ಯೋಜನೆಗಳನ್ನು ಅರ್ಹರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಈ ವಿಚಾರದಲ್ಲಿ ಅನಗತ್ಯ ವಿಳಂಬ ಮಾಡುವ ಅಧಿಕಾರಿಯ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕರಾಗಿರುವ ಅಜ್ಜಿಕುಟ್ಟಿರ ಪೊನ್ನಣ್ಣ ಎಚ್ಚರಿಕೆ ನೀಡಿದ್ದಾರೆ. ಕೊಡಗಿನಲ್ಲಿ, ಅಕಾಲಿಕ ಮಳೆ ಮತ್ತಿತರ ಅಡಚಣೆಗಳ ನಡುವೆಯೂ, ಈಗಾಗಲೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರಕಿದ್ದು, ಎಲ್ಲಾ ಇಲಾಖೆಗಳಿಗೂ, ಸಂಬಂಧ ಪಟ್ಟ ಯೋಜನೆಯ ಅನುಸಾರ ಅನುದಾನ ನೀಡಲಾಗುತ್ತಿದೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು […]
Continue Reading