
ಮಡಿಕೇರಿ ಆ.08(Nadubade News): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವು ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕುಳುವ ಸಮಾಜದ ಜಿಲ್ಲಾಧ್ಯಕ್ಷರಾದ ಎಚ್.ಪಿ.ಮಹೇಶ್, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಬೆಳ್ಳಿಯಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಇತರರು ಪಾಲ್ಗೊಳ್ಳಲಿದ್ದಾರೆ.