
ಮಡಿಕೇರಿ ಆ.05(Nadubade News): ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಾಳೆ ಬುಧವಾರ ಬೆಳಗ್ಗೆ 10.30 ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದ ಮುಂಭಾಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಕ್ಕಳ ವಿಭಾಗದ ಪ್ರಾಧ್ಯಾಪಕರು ಮತ್ತು ವಿಭಾಗ ಮುಖ್ಯಸ್ಥರಾದ ಡಾ.ಪುರುಷೋತ್ತಮ ತಿಳಿಸಿದ್ದಾರೆ.